Monday, 18 March 2013

Bhagavad Gita Kannada

ಒಬ್ಬ ಸಾಮಾನ್ಯ ಮನುಷ್ಯನಿಗೆ ದಿನವೂ ಯಜ್ಞ, ದಾನ, ತಪಸ್ಸನ್ನು ಮಾಡಲು ಸಾಧ್ಯವಿದೆಯೇ ?

ಸಾಧ್ಯವಿದೆ ...ನಾವು ಮಾಡುವ ಪ್ರತಿಯೊಂದು ಕೆಲಸವೂ ಒಂದು ದೇವರಪೂಜೆ, ಅದು ಭಗವಂತನಿಗೆ ಅರ್ಪಿತವಾಗಿ ಅವನು ಪ್ರೀತನಾಗಲಿ ಎಂದು ಮಾಡುವುದು ಯಜ್ಞ. ನಾನು ಆಡಿದ ಮಾತೆಲ್ಲವೂ ನಿನ್ನ ಸ್ತೋತ್ರವಾಗಲಿ, ನಾನು ನಡೆದ ನಡೆಯಲ್ಲವೂ ನಿನ್ನ ಪ್ರದಕ್ಷಿಣೆಯಾಗಲಿ, ನಾನು ಮಲಗಿದ್ದೆಲ್ಲವೂ ನಿನಗೆ ನಮಸ್ಕಾರವಾಗಲಿ, ನಾನು ಮಾಡುವ ಪ್ರತಿಯೊಂದು ಕರ್ಮವೂ ನಿನಗೆ ಪೂಜೆಯಾಗಲಿ ಎನ್ನುವ ಅನುಸಂಧಾನದಿಂದ ಬದುಕಿದಾಗ ಅದು ಯಜ್ಞವಾಗುತ್ತದೆ.

ಇನ್ನು ಎರಡನೇ ಕರ್ಮ-ದಾನ. ನಮ್ಮಲ್ಲಿಲ್ಲದ್ದನ್ನು ನಾವು ಇನ್ನೊಬ್ಬರಿಗೆ ಕೊಡಲು ಸಾಧ್ಯವಿಲ್ಲ. ಆದರೆ ಯಾರಿಗೆ ಯಾವಾಗ ಯಾವುದರ ಅಗತ್ಯವಿದೆಯೋ, ಅದು ನಮ್ಮಲ್ಲಿದ್ದರೆ, ಅದನ್ನು ನಿಸ್ವಾರ್ಥವಾಗಿ, ಪ್ರಚಾರದ ಬಯಕೆ ಇಲ್ಲದೆ ಕೊಡುವುದು ದಾನ.

ಮೂರನೆಯ ಕರ್ಮ-ತಪಸ್ಸು. ದೊಡ್ಡವರಿಗೆ ಗೌರವಕೊಡುವುದು, ಸ್ವಚ್ಛವಾಗಿರುವುದು, ಪ್ರಾಮಾಣಿಕವಾದ ನೇರ ನಡೆ, ಸ್ವಚ್ಛಂದಕಾಮಕ್ಕೆ ಕಡಿವಾಣ(ಬ್ರಹ್ಮಚರ್ಯ), ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದು, ಇತ್ಯಾದಿ. ಇದು ನಾವು ದೈನಂದಿನ ಜೀವನದಲ್ಲಿ ಆಚರಿಸಬಹುದಾದ ತಪಸ್ಸು..

No comments:

Post a Comment