ನಮಗೆ
ಅನುಪಯುಕ್ತವಾದ ವಸ್ತುವನ್ನು ಸಾಗಹಾಕುವುದಕ್ಕೋಸ್ಕರ ಕೊಡುವ ದಾನ ದಾನವಲ್ಲ. ಅತೀ
ಅಗತ್ಯವಾದ ವಸ್ತು ಇನ್ನೊಬ್ಬರಲ್ಲಿ ಇಲ್ಲದೆ ಅದು ನಮ್ಮಲ್ಲಿ ಇದ್ದರೆ,
ನಮ್ಮಲ್ಲಿರುವುದನ್ನು ಅವರಿಗೆ ಹಂಚಿ ಅವರ ಕೊರತೆ ನೀಗಿಸುವುದು ನಿಜವಾದ ದಾನ. ಒಬ್ಬ
ವ್ಯಕ್ತಿ ಒಂದು ಹೊತ್ತಿನ ಊಟಕ್ಕೆ ಗತಿ ಇಲ್ಲದೆ ಪರದಾಡುತ್ತಿರುವಾಗ ನಮ್ಮಲ್ಲಿ ಎರಡು
ಹೊತ್ತಿನ ಊಟಕ್ಕಾಗುವಷ್ಟು ಧಾನ್ಯವಿದ್ದರೆ, ನಮ್ಮ ನಾಳೆಯ ಬಗ್ಗೆ ಯೋಚಿಸದೆ, ಆ
ವ್ಯಕ್ತಿಗೆ ಒಂದು ಹೊತ್ತಿನ ಧಾನ್ಯವನ್ನು ದಾನ ಮಾಡುವುದು ನಿಜವಾದ ದಾನ.
ದಾನದಲ್ಲಿ ಅಶನ-ವಸನ-ಅನ್ನ ಇದನ್ನು ಯಾರಿಗೆ ಬೇಕಾದರೂ ದಾನ ಮಾಡಬಹುದು. ಇರುವುದಕ್ಕೆ
ತಾಣ, ಉಡುವುದಕ್ಕೆ ಬಟ್ಟೆ, ಹಸಿದವನಿಗೆ ಅನ್ನ. ಇದನ್ನು ಕೊಡುವುದಕ್ಕೆ ಯೋಗ್ಯ-ಅಯೋಗ್ಯ
ಎನ್ನುವ ನಿರ್ಬಂಧವಿಲ್ಲ. ಆದರೆ ಇತರೆ ವಸ್ತುವನ್ನು ದಾನ ಮಾಡುವಾಗ ಯಾವುದು ಯಾರಿಗೆ
ಅಗತ್ಯ ಮತ್ತು ಯೋಗ್ಯ ಎಂದು ನೋಡಿ ದಾನ ಮಾಡಬೇಕು. ಪ್ರಚಾರಕ್ಕಾಗಿ ದಾನ ಮಾಡುವುದು-ಅದಾನ.
ಯಾವುದೇ ಬಯಕೆ ಇಲ್ಲದೆ ನಿಷ್ಪೃಹತೆಯಿಂದ ಕರ್ತವ್ಯ ದೃಷ್ಟಿಯಿಂದ ಯೋಗ್ಯವಾದ ದೇಶದಲ್ಲಿ,
ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ವ್ಯಕ್ತಿಗೆ ಮಾಡುವ ದಾನ ನಿಜವಾದ ದಾನ...
ದಾನದಲ್ಲಿ ಅಶನ-ವಸನ-ಅನ್ನ ಇದನ್ನು ಯಾರಿಗೆ ಬೇಕಾದರೂ ದಾನ ಮಾಡಬಹುದು. ಇರುವುದಕ್ಕೆ ತಾಣ, ಉಡುವುದಕ್ಕೆ ಬಟ್ಟೆ, ಹಸಿದವನಿಗೆ ಅನ್ನ. ಇದನ್ನು ಕೊಡುವುದಕ್ಕೆ ಯೋಗ್ಯ-ಅಯೋಗ್ಯ ಎನ್ನುವ ನಿರ್ಬಂಧವಿಲ್ಲ. ಆದರೆ ಇತರೆ ವಸ್ತುವನ್ನು ದಾನ ಮಾಡುವಾಗ ಯಾವುದು ಯಾರಿಗೆ ಅಗತ್ಯ ಮತ್ತು ಯೋಗ್ಯ ಎಂದು ನೋಡಿ ದಾನ ಮಾಡಬೇಕು. ಪ್ರಚಾರಕ್ಕಾಗಿ ದಾನ ಮಾಡುವುದು-ಅದಾನ. ಯಾವುದೇ ಬಯಕೆ ಇಲ್ಲದೆ ನಿಷ್ಪೃಹತೆಯಿಂದ ಕರ್ತವ್ಯ ದೃಷ್ಟಿಯಿಂದ ಯೋಗ್ಯವಾದ ದೇಶದಲ್ಲಿ, ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ವ್ಯಕ್ತಿಗೆ ಮಾಡುವ ದಾನ ನಿಜವಾದ ದಾನ...
No comments:
Post a Comment