ಯಾವ
ಕಾಲಕ್ಕೂ ನಾವು ನಮ್ಮ ನಿಯತಕರ್ಮವನ್ನು ತೊರೆಯಬಾರದು. ಒಂದು ವೇಳೆ ತಪ್ಪು
ತಿಳುವಳಿಕೆಯಿಂದ ನಿಯತ ಕರ್ಮವನ್ನು ಬಿಟ್ಟರೆ ಆಗ ಅದು ತಾಮಸ ತ್ಯಾಗ ಎನಿಸುತ್ತದೆ. ಇಲ್ಲಿ
‘ನಿಯತಕರ್ಮ’ ಎಂದರೆ ನಮ್ಮ ಜೀವಯೋಗ್ಯತೆಗೆ ಯಾವುದು ನಿಯತವೋ ಆ ಕರ್ಮ. ನಮಗೆ ತಿಳಿದಂತೆ
ಎಲ್ಲ ಕರ್ಮವನ್ನು ಎಲ್ಲರೂ ಮಾಡುವಂತಿಲ್ಲ.
ಉದಾಹರಣೆಗೆ ಯಜ್ಞ: ಯತಿಗಳು
ಅಗ್ನಿಮುಖದಲ್ಲಿ ಆಹುತಿ ನೀಡುವಂತಿಲ್ಲ; ಬ್ರಹ್ಮಚಾರಿಗಳು ಪೂರ್ಣಪ್ರಮಾಣದ ಅಗ್ನಿಹೋತ್ರ
ಮಾಡುವಂತಿಲ್ಲ. ಆದರೆ ಯತಿಗಳು ಜ್ಞಾನಯಜ್ಞ ಮಾಡಬಹುದು ಅದು ಅವರ ನಿಯತಕರ್ಮ. ಎಲ್ಲ
ಕಾಲದಲ್ಲೂ ಎಲ್ಲರೂ ಮಾಡಬಹುದಾದ ಯಜ್ಞ ‘ನಾಮಯಜ್ಞ’. ಅಂದರೆ ಭಗವಂತನ ನಾಮ ಸ್ಮರಣೆ. ಇದು
ಯಜ್ಞದಲ್ಲಿ ಎಲ್ಲರಿಗೂ ಅನ್ವಯಿಸುವ ನಿಯತಕರ್ಮ.
ಇನ್ನು ದಾನ: ಬ್ರಹ್ಮಚಾರಿಗಳು
ಕನ್ಯಾದಾನ ಮಾಡಲಾಗುವುದಿಲ್ಲ, ಅದನ್ನು ಗೃಹಸ್ಥ ಮಾಡಬೇಕು. ಗೃಹಸ್ಥನಿಗೆ ಕನ್ಯಾದಾನ
ನಿಯತಕರ್ಮ. ಎಲ್ಲರೂ ಮಾಡಬಹುದಾದ ದಾನ-ಅಭಯದಾನ ಮತ್ತು ಜ್ಞಾನದಾನ.
ಮೂರನೆಯದು
ತಪಸ್ಸು: ಕೆಲವು ತಪಸ್ಸನ್ನು ಎಲ್ಲರೂ ಮಾಡಲಾಗುವುದಿಲ್ಲ. ಅದಕ್ಕೆ ವೇದಧೀಕ್ಷೆ
ಬೇಕಾಗಬಹುದು. ಆದರೆ ಎಲ್ಲರೂ ಮಾಡಬಹುದಾದ ತಪಸ್ಸು ಎಂದರೆ ಉಪವಾಸಾದಿ ವೃತಾನುಷ್ಠಾನಗಳು. ಈ
ತಪಸ್ಸನ್ನು ಮನುಷ್ಯ ಮಾತ್ರದವರು ಮಾಡಬಹುದು. ಹೀಗೆ ಯಾರಿಗೆ ಯಾವ ಕರ್ಮ ನಿಯತವೋ ಆ
ಕರ್ಮವನ್ನು ಮಾಡಬೇಕು. ನಿಯತ ಕರ್ಮದಲ್ಲಿ ಫಲಾಪೇಕ್ಷೆಯ ಪ್ರಶ್ನೆಯೇ ಇಲ್ಲ...
ಉದಾಹರಣೆಗೆ ಯಜ್ಞ: ಯತಿಗಳು ಅಗ್ನಿಮುಖದಲ್ಲಿ ಆಹುತಿ ನೀಡುವಂತಿಲ್ಲ; ಬ್ರಹ್ಮಚಾರಿಗಳು ಪೂರ್ಣಪ್ರಮಾಣದ ಅಗ್ನಿಹೋತ್ರ ಮಾಡುವಂತಿಲ್ಲ. ಆದರೆ ಯತಿಗಳು ಜ್ಞಾನಯಜ್ಞ ಮಾಡಬಹುದು ಅದು ಅವರ ನಿಯತಕರ್ಮ. ಎಲ್ಲ ಕಾಲದಲ್ಲೂ ಎಲ್ಲರೂ ಮಾಡಬಹುದಾದ ಯಜ್ಞ ‘ನಾಮಯಜ್ಞ’. ಅಂದರೆ ಭಗವಂತನ ನಾಮ ಸ್ಮರಣೆ. ಇದು ಯಜ್ಞದಲ್ಲಿ ಎಲ್ಲರಿಗೂ ಅನ್ವಯಿಸುವ ನಿಯತಕರ್ಮ.
ಇನ್ನು ದಾನ: ಬ್ರಹ್ಮಚಾರಿಗಳು ಕನ್ಯಾದಾನ ಮಾಡಲಾಗುವುದಿಲ್ಲ, ಅದನ್ನು ಗೃಹಸ್ಥ ಮಾಡಬೇಕು. ಗೃಹಸ್ಥನಿಗೆ ಕನ್ಯಾದಾನ ನಿಯತಕರ್ಮ. ಎಲ್ಲರೂ ಮಾಡಬಹುದಾದ ದಾನ-ಅಭಯದಾನ ಮತ್ತು ಜ್ಞಾನದಾನ.
ಮೂರನೆಯದು ತಪಸ್ಸು: ಕೆಲವು ತಪಸ್ಸನ್ನು ಎಲ್ಲರೂ ಮಾಡಲಾಗುವುದಿಲ್ಲ. ಅದಕ್ಕೆ ವೇದಧೀಕ್ಷೆ ಬೇಕಾಗಬಹುದು. ಆದರೆ ಎಲ್ಲರೂ ಮಾಡಬಹುದಾದ ತಪಸ್ಸು ಎಂದರೆ ಉಪವಾಸಾದಿ ವೃತಾನುಷ್ಠಾನಗಳು. ಈ ತಪಸ್ಸನ್ನು ಮನುಷ್ಯ ಮಾತ್ರದವರು ಮಾಡಬಹುದು. ಹೀಗೆ ಯಾರಿಗೆ ಯಾವ ಕರ್ಮ ನಿಯತವೋ ಆ ಕರ್ಮವನ್ನು ಮಾಡಬೇಕು. ನಿಯತ ಕರ್ಮದಲ್ಲಿ ಫಲಾಪೇಕ್ಷೆಯ ಪ್ರಶ್ನೆಯೇ ಇಲ್ಲ...
No comments:
Post a Comment