Baratipura

Friday, 29 March 2013

Bhagavad Gita Kannada

ಯಾವ ಕಾಲಕ್ಕೂ ನಾವು ನಮ್ಮ ನಿಯತಕರ್ಮವನ್ನು ತೊರೆಯಬಾರದು. ಒಂದು ವೇಳೆ ತಪ್ಪು ತಿಳುವಳಿಕೆಯಿಂದ ನಿಯತ ಕರ್ಮವನ್ನು ಬಿಟ್ಟರೆ ಆಗ ಅದು ತಾಮಸ ತ್ಯಾಗ ಎನಿಸುತ್ತದೆ. ಇಲ್ಲಿ ‘ನಿಯತಕರ್ಮ’ ಎಂದರೆ ನಮ್ಮ ಜೀವಯೋಗ್ಯತೆಗೆ ಯಾವುದು ನಿಯತವೋ ಆ ಕರ್ಮ. ನಮಗೆ ತಿಳಿದಂತೆ ಎಲ್ಲ ಕರ್ಮವನ್ನು ಎಲ್ಲರೂ ಮಾಡುವಂತಿಲ್ಲ.

ಉದಾಹರಣೆಗೆ ಯಜ್ಞ: ಯತಿಗಳು ಅಗ್ನಿಮುಖದಲ್ಲಿ ಆಹುತಿ ನೀಡುವಂತಿಲ್ಲ; ಬ್ರಹ್ಮಚಾರಿಗಳು ಪೂರ್ಣಪ್ರಮಾಣದ ಅಗ್ನಿಹೋತ್ರ ಮಾಡುವಂತಿಲ್ಲ. ಆದರೆ ಯತಿಗಳು ಜ್ಞಾನಯಜ್ಞ ಮಾಡಬಹುದು ಅದು ಅವರ ನಿಯತಕರ್ಮ. ಎಲ್ಲ ಕಾಲದಲ್ಲೂ ಎಲ್ಲರೂ ಮಾಡಬಹುದಾದ ಯಜ್ಞ ‘ನಾಮಯಜ್ಞ’. ಅಂದರೆ ಭಗವಂತನ ನಾಮ ಸ್ಮರಣೆ. ಇದು ಯಜ್ಞದಲ್ಲಿ ಎಲ್ಲರಿಗೂ ಅನ್ವಯಿಸುವ ನಿಯತಕರ್ಮ.
ಇನ್ನು ದಾನ: ಬ್ರಹ್ಮಚಾರಿಗಳು ಕನ್ಯಾದಾನ ಮಾಡಲಾಗುವುದಿಲ್ಲ, ಅದನ್ನು ಗೃಹಸ್ಥ ಮಾಡಬೇಕು. ಗೃಹಸ್ಥನಿಗೆ ಕನ್ಯಾದಾನ ನಿಯತಕರ್ಮ. ಎಲ್ಲರೂ ಮಾಡಬಹುದಾದ ದಾನ-ಅಭಯದಾನ ಮತ್ತು ಜ್ಞಾನದಾನ.
ಮೂರನೆಯದು ತಪಸ್ಸು: ಕೆಲವು ತಪಸ್ಸನ್ನು ಎಲ್ಲರೂ ಮಾಡಲಾಗುವುದಿಲ್ಲ. ಅದಕ್ಕೆ ವೇದಧೀಕ್ಷೆ ಬೇಕಾಗಬಹುದು. ಆದರೆ ಎಲ್ಲರೂ ಮಾಡಬಹುದಾದ ತಪಸ್ಸು ಎಂದರೆ ಉಪವಾಸಾದಿ ವೃತಾನುಷ್ಠಾನಗಳು. ಈ ತಪಸ್ಸನ್ನು ಮನುಷ್ಯ ಮಾತ್ರದವರು ಮಾಡಬಹುದು. ಹೀಗೆ ಯಾರಿಗೆ ಯಾವ ಕರ್ಮ ನಿಯತವೋ ಆ ಕರ್ಮವನ್ನು ಮಾಡಬೇಕು. ನಿಯತ ಕರ್ಮದಲ್ಲಿ ಫಲಾಪೇಕ್ಷೆಯ ಪ್ರಶ್ನೆಯೇ ಇಲ್ಲ...

No comments:

Post a Comment