Tuesday, 16 July 2013

ಪ್ರಾಣದೇವರು ಒಳಗಿನಿಂದ ಪಂಚಪ್ರಾಣರಾಗಿದ್ದಾರೆ; ಹೊರಗೆ ಪಂಚಭೂತಗಳಲ್ಲಿದ್ದಾರೆ;

ಪ್ರಾಣದೇವರು ಒಳಗಿನಿಂದ ಪಂಚಪ್ರಾಣರಾಗಿದ್ದಾರೆ; ಹೊರಗೆ ಪಂಚಭೂತಗಳಲ್ಲಿದ್ದಾರೆ; ಸೂರ್ಯನಲ್ಲಿದ್ದಾರೆ; ಇಂದ್ರಿಯಗಳಲ್ಲಿದ್ದಾರೆ; ಹುಟ್ಟು-ಸಾವುಗಳಲ್ಲಿದ್ದಾರೆ; ಪಂಚಕೋಶಗಳಲ್ಲಿ ತುಂಬಿ ನಮ್ಮನ್ನು ನಡೆಸುತ್ತಿದ್ದಾರೆ; ನಮ್ಮ ಬದುಕಿನ ಒಂದೊಂದು ಕ್ಷಣವೂ ಪ್ರಾಣದೇವರಿಂದ ನಿಯಂತ್ರಿಸಲ್ಪಡುತ್ತದೆ- ಎಂದು ತಿಳಿದು ಯಾರು ಉಪಾಸನೆ ಮಾಡುತ್ತಾರೋ: ಅವರು ಜೀವನದಲ್ಲಿ ಎಂದೂ ದುರಂತವನ್ನು [ಚಿಕ್ಕವರು ತಮ್ಮ ಕಣ್ಣ ಮುಂದೆ ಸಾಯುವ ದುರಂತ] ಕಾಣುವುದಿಲ್ಲ; ಅವರ ಬುದ್ಧಿಶಕ್ತಿ ಎಂದೂ ಕುಂದುವುದಿಲ್ಲ; ಅವರು ಬುದ್ಧಿವಂತ ಜ್ಞಾನಿಯಾಗಿ ಬೆಳೆಯುತ್ತಾರೆ; ಬಂದ ಜ್ಞಾನ ಅವರಲ್ಲಿ ಕೊನೇ ತನಕ ಸ್ಮರಣಶಕ್ತಿಯಾಗಿ ಉಳಿಯುತ್ತದೆ. ಮುಖ್ಯವಾಗಿ ಪ್ರಾಣದೇವರ ಉಪಾಸನೆ ಮಾಡುವುದರಿಂದ ಅವರು ಸಂಸಾರದಿಂದ ಪಾರಾಗಿ, ಶಾಶ್ವತವಾಗಿ ಮೋಕ್ಷದಲ್ಲಿ ಭಗವಂತನನ್ನು ಸೇರುತ್ತಾರೆ...

No comments:

Post a Comment