Monday, 7 October 2013

Dharma Granth Bhagwad Geeta

ಸ ಏವಾಯಂ ಮಯಾ ತೇSದ್ಯ ಯೋಗಃ ಪ್ರೋಕ್ತಃ ಪುರಾತನಃ।
ಭಕ್ತೋsಸಿ ಮೇ ಸಖಾ ಚೇತಿ ರಹಸ್ಯಂ ಹ್ಯೇತದುತ್ತಮಮ್ ॥೩॥

ಇಲ್ಲಿ ‘ರಹಸ್ಯವಾದ ಜ್ಞಾನವನ್ನು ನಿನಗೆ ಹೇಳುತ್ತಿದ್ದೇನೆ’ ಎಂದು ಕೃಷ್ಣ ಅರ್ಜುನನಿಗೆ ಹೇಳಿದ್ದಾನೆ. ಜ್ಞಾನವನ್ನು ರಹಸ್ಯವಾಗಿಡಲು ಎರಡು ಕಾರಣವಿದೆ. ಒಂದು ಅದರ ದುರುಪಯೋಗ ಹಾಗೂ ಇನ್ನೊಂದು ಅದರ ನಿರುಪಯೋಗ. ಯಾರು ಜ್ಞಾನವನ್ನು ಪಡೆದು ಅದನ್ನು ತಮ್ಮ ತಲೆಮಾರಿಗೆ ಕೊಡಲಾರರೋ ಅಂಥವರಿಗೆ ಜ್ಞಾನವನ್ನು ಕೊಡುವುದು ವ್ಯರ್ಥ. ಇದರಿಂದ ಜ್ಞಾನ ಪರಂಪರೆ ಹರಿದು ಬರಲಾರದು. ಇನ್ನು ದುರುಪಯೋಗ. ಜ್ಞಾನ ಇರುವುದು ನಮ್ಮ ಅಂತರಂಗದ ಉದ್ಧಾರಕ್ಕೆ ಹಾಗೂ ಇನ್ನೊಬ್ಬರ ಉದ್ಧಾರದ ದಾರಿ ತೋರುವುದಕ್ಕಾಗಿಯೇ, ಹೊರತು ವ್ಯವಹಾರ-ವ್ಯಾಪಾರ ಮಾಡುವುದಕ್ಕಾಗಿ ಅಲ್ಲ. ಜ್ಞಾನದಿಂದ ಸಮಾಜವನ್ನು ಮೋಸಗೊಳಿಸಬಹುದು. ತಿಳುವಳಿಕೆ ಇಲ್ಲದವರನ್ನು ತನ್ನ ತಿಳುವಳಿಕೆಯಿಂದ ಮೋಸ ಮಾಡಿ ವಂಚಿಸಬಹುದು. ಈ ಎಲ್ಲಾ ಕಾರಣದಿಂದ ಜ್ಞಾನ ರಹಸ್ಯ ವಿಷಯ. ಹಿಂದೆ ಯೋಗ ಸಿದ್ಧಿಯಿಂದ ಮಾಯವಾಗುವ ವಿದ್ಯೆ ಜ್ಞಾನಿಗಳಿಗೆ ತಿಳಿದಿತ್ತು. ಇಂತಹ ಅಮೂಲ್ಯ ವಿದ್ಯೆಯ ದುರುಪಯೋಗ ಅತೀ ಸುಲಭ. ಆ ಕಾರಣಕ್ಕಾಗಿ ಅದನ್ನು ರಹಸ್ಯವಾಗಿಟ್ಟರು. ಪ್ರಾಣಿ ಭಾಷೆಯನ್ನೂ ಅರ್ಥ ಮಾಡಿಕೊಳ್ಳುವ ವಿದ್ಯೆ ನಮ್ಮಲ್ಲಿತ್ತು. ಇದನ್ನೂ ಕೂಡಾ ರಹಸ್ಯವಾಗಿಟ್ಟರು. ಹೀಗೆ ಜ್ಞಾನದಿಂದ ದುರುಪಯೋಗವಾಗುವ ಸಾಧ್ಯತೆ ಇದ್ದಾಗ ಅದನ್ನು ರಹಸ್ಯವಾಗಿಡಬೇಕು. ಇಂತಹ ರಹಸ್ಯವಾದ ವ...See more
Like ·  ·  · 15 hours ago · 

No comments:

Post a Comment