Wednesday, 2 October 2013

ಶ್ರೀಕೃಷ್ಣ ಮಹಾಭಾರತದ ಮುಖೇನ ನಮಗೆ ಧರ್ಮದ ಒಂದು ಹೊಸ ಸಿದ್ಧಾಂತವನ್ನು ಕೊಟ್ಟ. ಮಹಾಭಾರತಕ್ಕೆ ಮೊದಲು ಇದ್ದ ಧರ್ಮದ ಕಲ್ಪನೆಯೇ ಬೇರೆ. ಉದಾಹರಣೆಗೆ ಸತ್ಯ ಹೇಳುವುದು: ಇದ್ದದ್ದನ್ನು ಇದ್ದಂತೆ ಹೇಳುವುದು ಸತ್ಯ. ಆದರೆ ಕೃಷ್ಣನ ಪ್ರಕಾರ-ಯಾವ ಸುಳ್ಳು ಹೇಳುವುದರಿಂದ ಸಮಾಜಕ್ಕೆ ಹಿತವಾಗುತ್ತದೋ ಅದು ಸತ್ಯ; ಯಾವ ಸತ್ಯ ಹೇಳುವುದರಿಂದ ಸಮಾಜಕ್ಕೆ ಕೆಡುಕಾಗುತ್ತದೋ ಅದು ಸುಳ್ಳು. ಇನ್ನು ಹಿಂಸೆ: ಒಂದು ಹಿಂಸೆಯಿಂದ ಅನೇಕ ಅಹಿಂಸೆ ಸಾಧ್ಯವಾದರೆ ಅದು ಅಹಿಂಸೆ. ಉದಾಹರಣೆಗೆ ನರಭಕ್ಷಕ ಹುಲಿಯೊಂದು ಪ್ರತಿದಿನ ಊರಿಗೆ ದಾಳಿಯಿಟ್ಟು ಒಬ್ಬೊಬ್ಬರನ್ನೇ ತಿನ್ನುತ್ತಿದ್ದರೆ, ಅದನ್ನು ಕೊಲ್ಲುವುದು ಪ್ರಾಣಿ ಹಿಂಸೆ ಅಲ್ಲ. ಒಂದು ಯುದ್ಧದಿಂದ ತಲತಲಾಂತರದವರೆಗೆ ಅಹಿಂಸೆ ಸ್ಥಾಪನೆ ಸಾಧ್ಯವಾದರೆ ಯುದ್ಧಮಾಡುವುದರಲ್ಲಿ ತಪ್ಪಿಲ್ಲ. ಯಾವುದರಿಂದ ಸಜ್ಜನಿಕೆಯ ರಕ್ಷಣೆ ಆಗುತ್ತದೋ ಅದು ಸತ್ಯ. ಧರ್ಮಕ್ಕೆ ಭಾವ ಮುಖ್ಯ. ಯಾವ ಕಾರಣಕ್ಕಾಗಿ ಹೋರಾಡುತ್ತೇವೋ, ಅದರ ಹಿಂದೆ ಇರುವ ಉದ್ದೇಶ ಏನು ಎನ್ನುವುದು ಮುಖ್ಯ.

No comments:

Post a Comment