Wednesday, 4 December 2013

ಗುರುಕೃಪಾಯೋಗದ ಮಹತ್ವ

ಗುರುಕೃಪಾಯೋಗದ ಮಹತ್ವ

ಜ್ಞಾನವನ್ನು ಗಳಿಸಬೇಕಾದರೆ "ನೀನು ಜ್ಞಾನಿಗಳ ಬೆನ್ನುಹತ್ತಬೇಕು; ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಂಡ ತತ್ವದರ್ಶಿಗಳಿಂದ ಜ್ಞಾನವನ್ನು ಪಡೆ ಎನ್ನುತ್ತಾನೆ ಕೃಷ್ಣ. ಜ್ಞಾನ ಎನ್ನುವುದು ಕೇವಲ ಪುಸ್ತಕವನ್ನು ಓದುವುದರಿಂದ ಬರುವುದಲ್ಲ. ಅದು ನಮಗೆ ಸಾಕ್ಷಾತ್ಕಾರವಾಗಬೇಕು. "Truth is an intuitional flash, it is not Intellectual". ಸತ್ಯ ಎನ್ನುವುದು ನಮಗೆ ಸ್ಪುರಣವಾಗಬೇಕು. ಎಲ್ಲಾ ವೇದ ಮಂತ್ರಗಳೂ ಋಷಿಗಳಿಗೆ ಅಂತರಂಗದಲ್ಲಿ ಸ್ಪೂರಣವಾಗಿರುವುದು(intuitional composition). ನ್ಯೂಟನ್ ಗೆ ಗುರುತ್ವಾಕರ್ಷಣ ಶಕ್ತಿಯ ವಿಚಾರ ಹೊಳೆದಂತೆ. ಈ ಕಾರಣಕ್ಕಾಗಿ ಮೊದಲು ನಾವು ಸತ್ಯಕ್ಕೆ ಶರಣಾಗಬೇಕು; ಸತ್ಯವನ್ನು ಕಂಡ ತತ್ವಜ್ಞಾನಿಗಳ ಬೆನ್ನುಹತ್ತಬೇಕು.

ಸಾಮಾನ್ಯವಾಗಿ ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಂಡ ಜ್ಞಾನಿಗಳು ಜ್ಞಾನವನ್ನು ಯೋಗ್ಯರಲ್ಲದವರಿಗೆ ಎಂದೂ ಬೋಧಿಸುವುದಿಲ್ಲ. ಈ ಕಾರಣಕ್ಕಾಗಿ ಕೃಷ್ಣ ಹೇಳುತ್ತಾನೆ: "ತತ್ವದರ್ಶಿಗಳನ್ನು ಕಂಡರೆ ಬಿಡಬೇಡ, ಅವರ ಬೆನ್ನು ಹತ್ತು, ಅವರನ್ನು ಒಲಿಸಿಕೋ, ಅವರ ಮುಂದೆ ನೀನು ಯೋಗ್ಯ ಎಂದು ರುಜುವಾತು ಪಡಿಸು. ನಿನ್ನ ಅನನ್ಯ ಬಯಕೆ ಅವರಿಗೆ ಮನವರಿಕೆಯಾಗುವಂತೆ ಮಾಡು, ಅವರಿಗೆ ಶರಣಾಗು" ಎಂದು. ಇಲ್ಲಿ 'ಪ್ರಣಿಪಾತ' ಅಂದರೆ ಎಂಟು ಅಂಗಗಳ ನಮಸ್ಕಾರ. ತಲೆ, ಎದೆ, ಕೈ, ಕಾಲು ಎಲ್ಲವನ್ನು ನೆಲಕ್ಕೆ ತಾಗಿಸಿ, ಭಕ್ತಿಯ ದೃಷ್ಟಿಯಿಂದ, ಸ್ತೋತ್ರ(ವಚನ) ಮುಖೇನ, ಮನಸ್ಸಿನಲ್ಲಿ ಅಪಾರ ಗೌರವವಿಟ್ಟು ಮಾಡುವ ನಮಸ್ಕಾರ-'ಅಷ್ಟಾಂಗ ನಮನ'. ಹೀಗೆ ಶರಣಾಗಿ "ಕೆದಕಿ ಕೆದಕಿ, ಪರಿಪರಿಯಾಗಿ ಕೇಳಿ ತಿಳಿದುಕೋ" ಎನ್ನುತ್ತಾನೆ ಕೃಷ್ಣ. 'ತತ್ವದರ್ಶಿಗಳ ಸೇವೆಮಾಡಿ ಅವರಿಂದ ಜ್ಞಾನವನ್ನು ಗಳಿಸು, ಅದರಿಂದ ಕರ್ಮ ಮಾಡು' ಎನ್ನುವುದು ಕೃಷ್ಣ ಅರ್ಜುನನ ಮೂಲಕ ನಮಗೆ ಕೊಟ್ಟ ಸಂದೇಶ.

ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾಪ್ರವಚನ

Take mouse over on Dharma Granth and click Like !

Like - www.fb.com/dharma.granth
Visit - http://dharmagranth.blogspot.in/
Subscribe Email - http://tiny.cc/Dharma-Granth-Group

.
L· 

No comments:

Post a Comment