ನಮ್ಮ ಎಲ್ಲ ಸಮಸ್ಯೆಗಳ ಮೂಲ ನಮ್ಮ ಸಂಕಲ್ಪಗಳು. ಸಂಕಲ್ಪಗಳು ಎಂದರೆ ಮನಸ್ಸಿನಲ್ಲಿ ಏನೇನು ಮಾಡಬೇಕು ಎನ್ನುವ ತೀರ್ಮಾನ. ನಾವು ಯಾವುದೇ ಒಂದು ಕೆಲಸ ಮಾಡುವ ಮೊದಲು ಅದನ್ನು ಮಾನಸಿಕವಾಗಿ ಮಾಡುತ್ತೇವೆ. ಇಂದು ಇಲ್ಲಿಗೆ ಹೋಗಬೇಕು, ಇಂತವರನ್ನು ಭೇಟಿಯಾಗಬೇಕು, ಅಲ್ಲಿ ಇಂತಹದ್ದನ್ನು ಪಡೆಯಬೇಕು, ಇತ್ಯಾದಿ ವೇಳಾಪಟ್ಟಿ ನಮ್ಮ ಮನಸ್ಸಿನಲ್ಲಿ ನೆಟ್ಟಿರುತ್ತದೆ. ಈ ರೀತಿ ಸಾವಿರ ಸಂಕಲ್ಪಗಳು, ಅದನ್ನು ಈಡೇರಿಸಿಕೊಳ್ಳುವುದಕ್ಕೆ ಸಾವಿರ ಬಯಕೆಗಳು. ‘ಹೀಗೆ ಮಾಡಬೇಕು ಅದರಿಂದ ಹೀಗೇ ಆಗಬೇಕು ಎನ್ನುವ ಆಸೆಗಳು’. ಬದುಕು ಎಂದರೆ ನಾವು ನಮ್ಮ ಮನಸ್ಸಿನಲ್ಲಿ ಕಲ್ಪಿಸಿಕೊಂಡ ಬದುಕಿನ ರೂಪುರೇಷೆಯನ್ನು ಬಾಹ್ಯ ಪ್ರಪಂಚದಲ್ಲಿ ಸಾಕಾರಗೊಳಿಸುವ ಪ್ರಯತ್ನ. ಹೀಗೆ ಸಾವಿರಾರು ಸಂಕಲ್ಪ ಮತ್ತು ಕಾಮನೆಯನ್ನು ಮನಸ್ಸಿನಲ್ಲಿ ತುಂಬುತ್ತಾ ಹೋದರೆ ಮನಸ್ಸಿಗೆ ಅದರಿಂದಾಚೆಗೆ ಯೋಚಿಸಲು ಅವಕಾಶವೇ ಇಲ್ಲವಾಗುತ್ತದೆ. ಮನಸ್ಸು ಎಂದರೆ ಬರೀ ಸಂಕಲ್ಪ-ವಿಕಲ್ಪ. ಏನೇನೋ ಕನಸು ಕಟ್ಟುವುದು(ಸಂಕಲ್ಪ), ಮಾಡಬೇಕೋ ಬೇಡವೋ, ಮಾಡಿದರೆ ಯಶಸ್ವಿ ಆದೀತೋ ಇಲ್ಲವೋ (ವಿಕಲ್ಪ) ಎಂದು ಯೋಚಿಸುತ್ತ ಅದರಿಂದ ಗೊಂದಲಕ್ಕೊಳಗಾಗುವುದು-ಇದರಿಂದಾಚೆಗೆ ಮನಸ್ಸು ಹೋಗುವುದೇ ಇಲ್ಲ. ಈ ಸಂಕಲ್ಪಗಳು ತಿರುಕನ ಕನಸಿನಂತೆ. ಎಷ್ಟು ಹೆಚ್ಚು ಸಂಕಲ್ಪ ನಮ್ಮ ಮನಸ್ಸಿಗೆ ಬರುತ್ತದೆ ಅಷ್ಟೇ ಹತಾಶೆ ಹೆಚ್ಚಾಗುತ್ತದೆ, ಅದರಿಂದ ವ್ಯಾಕುಲತೆ. ನಂತರ ಏನನ್ನೂ ಯೋಚಿಸಲು ಆಗುವುದಿಲ್ಲ.. ಬಯಸುವುದು ಮನಸ್ಸಿನ ಸಹಜ ಗುಣ, ಬಯಸದೆ ಬದುಕಿಲ್ಲ. ಅದಕ್ಕಾಗಿ ಏನು ಬರುತ್ತದೋ ಅದು ಬರಲಿ ಎಂದು ಬಯಸುವುದನ್ನು ಕಲಿತು ನಮ್ಮ ಇತರ ಸಂಕಲ್ಪ ವಿಕಲ್ಪವನ್ನು ಬಿಟ್ಟುಬಿಡಬೇಕು- ಇದು ಯಶಸಿನ ಸೂತ್ರ. ಬಯಸಿದ್ದು ಸಿಗುವುದಿಲ್ಲ, ಬಯಸಿದಂತೆ ಆಗುವುದಿಲ್ಲ ಎಂದ ಮೇಲೆ ಅನಗತ್ಯ ಕನಸಿನ ಗೋಪುರ ಕಟ್ಟುವುದರಲ್ಲಿ ಯಾವ ಅರ್ಥವೂ ಇಲ್ಲ. ನಮ್ಮ ಸಂಕಲ್ಪ ಕೇವಲ ಒಂದೇ ಒಂದು ‘ಭಗವಂತನ ಸಂಕಲ್ಪ ಹೇಗೋ ಹಾಗೆ’. ದ್ವಾದಶ ಸ್ತೋತ್ರದಲ್ಲಿ ಶ್ರೀ ಮಧ್ವಾಚಾರ್ಯರು ಹೇಳುವಂತೆ:
ಕುರು ಭುಂಕ್ಷ್ವ ಚ ಕರ್ಮ ನಿಜಂ ನಿಯತಂ ಹರಿಪಾದ ವಿನಮ್ರಧಿಯಾ ಸತತಂ |
ಹರಿರೇವ ಪರೋ ಹರಿರೇವ ಗುರುಃ ಹರಿರೇವ ಜಗತ್ ಪಿತೃಮಾತೃಗತಿಃ || ೩-೧ ||
ನಿನ್ನ ಪಾಲಿನ ಕರ್ಮ ಮಾಡು, ಬಂದುದನ್ನುಣ್ಣು. ಹರಿಯ ಚರಣದ ಅರಿವು ತಪ್ಪದಿರಲಿ. ನನ್ನದು ಎನ್ನುವ ಪ್ರತ್ಯೇಕ ಸಂಕಲ್ಪ ಬೇಡ. ವೇದದಲ್ಲಿ ಹೇಳುವಂತೆ ‘ಭಗವಂತನ ಕಾಮನೆಯೇ ನನ್ನ ಕಾಮನೆಯಾಗಲಿ, ಆತನ ಇಚ್ಛೆಯೇ ನನ್ನ ಇಚ್ಛೆಯಾಗಲಿ, ಅದರಿಂದ ನನ್ನ ಕಾಮನೆ ಭಗವಂತನ ಕಾಮನೆಗೆ ಶ್ರುತಿಗೂಡಲಿ’. ಹೀಗೆ ಆದಾಗ ಅಪಸ್ವರ ಹೊರಡುವುದಿಲ್ಲ. ನಮ್ಮ ಬಯಕೆ ಭಗವಂತನ ಇಚ್ಛೆಗೆ ಅನುರಣನವಾದಾಗ (State of Resonance) ಬಾಳಿನ ಸಂಗೀತದಲ್ಲಿ ಮಾಧುರ್ಯ ನಿರ್ಮಾಣವಾಗುತ್ತದೆ. ಭಗವಂತನ ಇಚ್ಚೆಗೆ ವಿರುದ್ಧವಾದ ಒಂದೂ ಸಂಕಲ್ಪ ನಮ್ಮಲ್ಲಿರಬಾರದು. ‘ನೀನು(ಭಗವಂತ) ಏನು ಬಯಸಿದೆಯೋ ಅದೇ ನನ್ನ ಸಂಕಲ್ಪ’-ಇದು ಒಬ್ಬ ಯೋಗಿ ಧ್ಯಾನದಲ್ಲಿ ತೊಡಗಿಸಿಕೊಳ್ಳಬೇಕಾದ ಏಕೈಕ ಸಂಕಲ್ಪ...

The art of loving creates the unity which has unlimited spiritual strength, and that is the greatest need in the world today. Each one of us can make such a difference if we become humble, if we develop a service attitude rather than an exploitative attitude, if we develop the broad mind to see the oneness and to learn to love all living beings. What a difference each one of us could make, and what a difference we could make if we are united on that principle.
No comments:
Post a Comment