Showing posts with label Bhagavad Gita Kannada. Show all posts
Showing posts with label Bhagavad Gita Kannada. Show all posts

Sunday 19 May 2013

Bhagavad Gita Kannada

ನೀನು ಯಾವುದೇ ಸ್ಥಿತಿಯಲ್ಲಿರು, ಕೆಂದಾವರೆಯ ಅರಳಿದ ಎಸಳಿನಂತೆ, ನಸುಗೆಂಪಾಗಿ, ಪ್ರೀತಿಯ ಕಾರುಣ್ಯದ ರಸಪೂರವನ್ನು ಹರಿಸುತ್ತಿರುವ, ಅರಳುಗಣ್ಣಿನ ಭಗವಂತನನ್ನು ನೆನೆಸಿಕೂ... ಆತನ ರಸಧಾರೆ ನಿನ್ನ ಮೇಲೆ ಬೀಳುತ್ತಿದೆ ಎಂದು ಯೋಚಿಸು. ಆಗ ನೀನು ಮಡಿಯಾಗುತೀಯ. ಈ ಸ್ಥಿತಿಯಲ್ಲಿ ನೀನು ಮೈಲಿಗೆಯಾಗಲು ಸಾಧ್ಯವಿಲ್ಲ. ನಿನ್ನನ್ನು ಮುಟ್ಟಿದವರೂ ಕೂಡ ನಿನ್ನಿಂದ ಮಡಿಯಾಗುತ್ತಾರೆ! ನೀನು ಧರಿಸಿರುವ ಬಟ್ಟೆಯಾಗಲಿ, ಇತರ ಯಾವುದೇ ವಸ್ತು ನಿನ್ನನ್ನು ಮೈಲಿಗೆ ಮಾಡಲಾರದು. ಭಗವಂತನ ಚಿಂತನೆ, ಭಗವಂತನ ಪ್ರಜ್ಞೆಯನ್ನು ಜಾಗೃತಗೊಳಿಸುವ ನೆಡೆಯೇ 'ಮಡಿ'. ಭಗವಂತನಿಂದ ದೂರ ಸರಿಸುವ ಅಜ್ಞಾನವೇ ಮೈಲಿಗೆ...
 
ಸಮುದ್ರ ಮಂಥನ ನಮ್ಮ ಜೀವನಕ್ಕೆ ಸಂಬಂದಪಟ್ಟ ಕಥೆ ಕೂಡಾ ಹೌದು. ಮನಸ್ಸು ಎಂಬ ಮಂದರ ಪರ್ವತದಿಂದ, ಶಾಸ್ತ್ರವೆಂಬ ಕಡಲನ್ನು ಮಂಥನ ಮಾಡುವಾಗ, ನಮ್ಮ ಮನಸ್ಸು ಪತನವಾಗದಂತೆ ಭಗವಂತ ಎತ್ತಿ ಹಿಡಿಯುತ್ತಾನೆ. ಈ ರೀತಿ ಶಾಸ್ತ್ರಾದ್ಯಾಯನದಲ್ಲಿ ಮೊದಲು ಹೊರ ಬರುವ ವಿಷ "ಸಂಶಯ ಅಥವಾ ಅಪನಂಬಿಕೆ", ನಂತರ ಬರುವ ಕಾಮದೇನು ಕಲ್ಪವೃಕ್ಷ "ಸಂಪತ್ತು" . ಈ ಸಂಪತ್ತಿನ ಸೆಳೆತದಿಂದ ಆಚೆ ಬಂದು, ಶಾಸ್ತ್ರ ಮಂಥನ ಮುಂದುವರಿಸಿದಾಗ, ತತ್ವಜ್ಞಾನವೆಂಬ ಅಮೃತ ದೊರೆಯುತ್ತದೆ. ಸಂಶಯವೆಂಬ ವಿಷದಿಂದ ನಮ್ಮನ್ನು ಪಾರುಮಾಡುವವನು ಮನೋಭಿಮಾನಿ ಶಿವ . ನಮ್ಮ ಮನಸ್ಸನ್ನು ನಿರಂತರವಾಗಿ ಎತ್ತಿ ಹಿಡಿದು ನಿಲ್ಲಿಸುವವ ಮಹಾದ್ರಿಧೃಕ್ ನಾಮಕ ಭಗವಂತ ...
❤Ram❤Siya Ram❤Siya Ram❤Jai Jai Ram❤
❤Ram❤Siya Ram❤Siya Ram❤Jai Jai Ram❤
❤Ram❤Siya Ram❤Siya Ram❤Jai Jai Ram❤
❤Ram❤Siya Ram❤Siya Ram❤Jai Jai Ram❤
 
śvaraḥ sarva-bhūtānāṁ
hṛd-deśe 'rjuna tiṣṭhati
bhrāmayan sarva-bhūtāni
yantrārūḍhāni māyayā
"The Supreme Lord is situated in everyone's heart, O Arjuna, and is directing the wanderings of all living entities, who are seated as on a machine, made of the material energy." The machine given by material nature — whether the machine of the body or the machine of the orbit, or kāla-cakra — works according to the orders given by the Supreme Personality of Godhead. The Supreme Personality of Godhead and material nature work together to maintain this great universe, and not only this universe but also the millions of other universes beyond this one.

Srimad Bhagavatam 5:23:3 purport

Friday 5 April 2013

Bhagavad Gita Kannada

ಓಂಕಾರ ಒಂದು ಬೀಜಾಕ್ಷರ. ಈ ಬೀಜಾಕ್ಷರವನ್ನು ಬಿಡಿಸಿದರೆ ಅದು ಸಮಸ್ತ ಭಾರತೀಯ ತತ್ತ್ವ ಶಾಸ್ತ್ರವನ್ನು ತನ್ನ ಗರ್ಭದಲ್ಲಿ ಧರಿಸಿದೆ ಎನ್ನುವುದು ನಮಗೆ ತಿಳಿಯುತ್ತದೆ. ವೇದದ ಸಾರ 'ಓಂಕಾರ'-ಅದೇ ಪ್ರಣವಃ.
ವೇದಗಳು ಅನೇಕ. ಋಗ್ವೇದದಲ್ಲಿ 24 ಶಾಖೆ, ಯಜುರ್ವೇದದಲ್ಲಿ 101 ಶಾಖೆ, ಸಾಮವೇದದಲ್ಲಿ 1000 ಶಾಖೆ, ಅಥರ್ವವೇದದಲ್ಲಿ 12 ಶಾಖೆ. ಹೀಗೆ ಒಟ್ಟು 1137 ಸಂಹಿತೆಗಳು. ಅದಕ್ಕೆ ಅಷ್ಟೇ ಬ್ರಾಹ್ಮಣಗಳು, ಅರಣ್ಯಕಗಳು, ಉಪನಿಷತ್ತುಗಳು. ಹೀಗೆ ವೇದವೆಂದರೆ ವಿಪುಲವಾದ ವೈದಿಕ ವಾಙ್ಮಯ. ಎಷ್ಟೇ ವೇದಗಳಿದ್ದರೂ ಕೂಡಾ, ಮೂಲತಃ ವೇದದಲ್ಲಿ ಪ್ರಮುಖವಾದ ಮೂರು ವಿಭಾಗವಿದೆ. ಪದ್ಯರೂಪ(ಋಗ್ವೇದ), ಗದ್ಯರೂಪ(ಯಜುರ್ವೇದ) ಮತ್ತು ಗಾನರೂಪ(ಸಾಮವೇದ). ಈ ಮೂರು ವೇದಗಳ, ಮೂರು ಅಕ್ಷರಗಳನ್ನು ತೆಗೆದುಕೊಂಡು ನಿರ್ಮಾಣವಾಗಿರುವುದು ಓಂಕಾರ.
“ಓಂಕಾರಕ್ಕೆ ಸಾರತ್ವವನ್ನು ಕೊಟ್ಟು ಸಾರಭೂತನಾಗಿ ‘ಪ್ರಣವಃ’ ಶಬ್ದವಾಚ್ಯನಾಗಿ ನಾನು ಓಂಕಾರದಲ್ಲಿ ನೆಲೆಸಿದ್ದೇನೆ” ಎಂದು ಗೀತೆಯಲ್ಲಿ ಸ್ವಯಂ ಭಗವಂತನೇ ಹೇಳಿದ್ದಾನೆ(ಗೀತಾ-೭-೦೮). ಇದು ಬಹಳ ವಿಚಾರಗರ್ಭಿತ ಸಂಗತಿ. ಪ್ರಾಚೀನರು ಮೂರು ವೇದಗಳನ್ನು ಭಟ್ಟಿ ಇಳಿಸಿ, ಅದರ ಸಾರವಾದ ಮೂರು ವರ್ಗಗಳ ಒಂದು ಸೂಕ್ತ ಮಾಡಿದರು. ಅದೇ ಪುರುಷಸೂಕ್ತ. ಈ ಕಾರಣದಿಂದ ವೇದಸೂಕ್ತಗಳಲ್ಲೇ ಪುರುಷಸೂಕ್ತ ಅತ್ಯಂತ ಶ್ರೇಷ್ಠವಾದ ಸೂಕ್ತ. ಈ ಸೂಕ್ತವನ್ನು ಮತ್ತೆ ಭಟ್ಟಿಇಳಿಸಿ, ಮೂರು ಪಾದಗಳ ಗಾಯತ್ತ್ರಿ ಮಂತ್ರ(ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್) ನಿರ್ಮಾಣವಾಯಿತು. ಇಲ್ಲಿ ‘ತತ್ ಸವಿತುರ್ ವರೇಣ್ಯಂ’ ಋಗ್ವೇದಕ್ಕೆ ಸಂಬಂಧಪಟ್ಟಿದ್ದು, ‘ಭರ್ಗೋ ದೇವಸ್ಯ ಧೀಮಹಿ’ ಯಜುರ್ವೇದಕ್ಕೆ ಸಂಬಂಧಪಟ್ಟಿದ್ದು, ‘ಧೀಯೊ ಯೊ ನಃ ಪ್ರಚೋದಯಾತ್’ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಹೀಗೆ ಮೂರು ವೇದಗಳ ಸಾರ ಗಾಯತ್ತ್ರಿಯ ಮೂರುಪಾದಗಳುಳ್ಳ ಒಂದು ಮಂತ್ರದಲ್ಲಿದೆ. ಇದಕ್ಕಾಗಿ ಗಾಯತ್ತ್ರಿ ಮಂತ್ರವನ್ನು ‘ವೇದಮಾತಾ’ ಎನ್ನುತ್ತಾರೆ. ಈ ಗಾಯತ್ತ್ರಿಯಿಂದ ರಸ ತೆಗೆದಾಗ ಮೂರು ಪಾದಗಳಿಂದ ಮೂರು ಪದಗಳುಳ್ಳ ವ್ಯಾಹೃತಿ: “ಭೂಃ ಭುವಃ ಸ್ವಃ”. ಈ ಮೂರು ಪದಗಳ ಸಾರ ಮೂರು ಅಕ್ಷರದ(ಅ, ಉ, ಮ) ಓಂಕಾರ-ॐ.
ಓಂಕಾರದಲ್ಲಿ ‘ಅ’ಕಾರ ಋಗ್ವೇದಕ್ಕೆ, ‘ಉ’ಕಾರ ಯಜುರ್ವೇದಕ್ಕೆ ಮತ್ತು ‘ಮ’ಕಾರ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಋಗ್ವೇದ " ಅಗ್ನಿಮೀ”ಳೇ ಪುರೋಹಿತಂ ಯಜ್ಞಸ್ಯ ದೇವಂ-ಋತ್ವಿಜಂ” | ಹೋತಾ”ರಂ ರತ್ನ ಧಾತಮಂ |..." ಎಂದು ‘ಅ’ ಕಾರದಿಂದ ಪ್ರಾರಂಭವಾಗುತ್ತದೆ. ಮತ್ತು “....ಸಮಾನೀ ವ ಆಕೂತಿಃ ಸಮಾನಾ ಹೃದಯಾನಿ ಹಃ: | ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ ॥” ಎಂದು ‘ಇ’ಕಾರದಲ್ಲಿ ಕೊನೆಗೊಳ್ಳುತ್ತದೆ. ಅಲ್ಲಿಂದ ಮುಂದುವರಿದು ಯಜುರ್ವೇದ “ಇಷೇ ತ್ವೋರ್ಜೆ ತ್ವಾ …” ಎಂದು ‘ಇ’ಕಾರದಿಂದ ಪ್ರಾರಂಭವಾಗಿ “……..ಸಮುದ್ರೋ ಬಂಧುಃ” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಹೀಗೆ ಓಂಕಾರದಲ್ಲಿನ ‘ಅ’ಕಾರ ಮತ್ತು ‘ಉ’ಕಾರ ಋಗ್ವೇದ ಮತ್ತು ಯಜುರ್ವೇದವನ್ನು ಪೂರ್ಣವಾಗಿ ಸೂಚಿಸುವ ಸಂಕ್ಷೇಪಣಾ(abbreviation)ರೂಪ. ಇಲ್ಲಿಂದ ಮುಂದೆ ಸಾಮವೇದ. ಸಾಮವೇದ “ಅಗ್ನ ಆ ಯಾಹಿ ………” ಎಂದು ‘ಅ’ಕಾರದಿಂದ ಆರಂಭವಾಗಿ “……ಬ್ರ್ಹಸ್ಪತಿರ್ದಧಾತು” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಇಲ್ಲಿ ‘ಮ’ ಕಾರ ಬಂದಿಲ್ಲ. ಆದರೆ ನಮಗೆ ತಿಳಿದಂತೆ ಸಾಮವೇದ ನಾದ ರೂಪದಲ್ಲಿದೆ. ಓಂಕಾರದಲ್ಲಿ ಕೂಡಾ ‘ಮ’ ಎನ್ನುವುದು ನಾದರೂಪದಲ್ಲಿ ಹೊರ ಹೊಮ್ಮುವ ಅಕ್ಷರ- ಅದು ಸಂಗೀತ. ಹೀಗೆ ಓಂಕಾರ ವೇದದ ಸಂಕ್ಷೇಪಣಾರೂಪವಾದ ಬೀಜಾಕ್ಷರ. ಇದು ನಮಗೆ ವೇದವನ್ನು ಗುರುತಿಸುವ ಮಾರ್ಗದರ್ಶಿ. ಆದ್ದರಿಂದ ಇದು ಭಗವಂತನನ್ನು ಸ್ತೋತ್ರ ಮಾಡುವ ಮಂತ್ರಗಳಲ್ಲಿ ಅತ್ಯಂತ ಪ್ರಕೃಷ್ಟವಾದುದ್ದು. ಇದಕ್ಕಿಂತ ದೊಡ್ಡ ಸ್ತೋತ್ರಮಾಡುವ ಶಬ್ದ ಈ ಪ್ರಪಂಚದಲ್ಲಿಲ್ಲ.

Friday 29 March 2013

Bhagavad Gita Kannada

ಯಾವ ಕಾಲಕ್ಕೂ ನಾವು ನಮ್ಮ ನಿಯತಕರ್ಮವನ್ನು ತೊರೆಯಬಾರದು. ಒಂದು ವೇಳೆ ತಪ್ಪು ತಿಳುವಳಿಕೆಯಿಂದ ನಿಯತ ಕರ್ಮವನ್ನು ಬಿಟ್ಟರೆ ಆಗ ಅದು ತಾಮಸ ತ್ಯಾಗ ಎನಿಸುತ್ತದೆ. ಇಲ್ಲಿ ‘ನಿಯತಕರ್ಮ’ ಎಂದರೆ ನಮ್ಮ ಜೀವಯೋಗ್ಯತೆಗೆ ಯಾವುದು ನಿಯತವೋ ಆ ಕರ್ಮ. ನಮಗೆ ತಿಳಿದಂತೆ ಎಲ್ಲ ಕರ್ಮವನ್ನು ಎಲ್ಲರೂ ಮಾಡುವಂತಿಲ್ಲ.

ಉದಾಹರಣೆಗೆ ಯಜ್ಞ: ಯತಿಗಳು ಅಗ್ನಿಮುಖದಲ್ಲಿ ಆಹುತಿ ನೀಡುವಂತಿಲ್ಲ; ಬ್ರಹ್ಮಚಾರಿಗಳು ಪೂರ್ಣಪ್ರಮಾಣದ ಅಗ್ನಿಹೋತ್ರ ಮಾಡುವಂತಿಲ್ಲ. ಆದರೆ ಯತಿಗಳು ಜ್ಞಾನಯಜ್ಞ ಮಾಡಬಹುದು ಅದು ಅವರ ನಿಯತಕರ್ಮ. ಎಲ್ಲ ಕಾಲದಲ್ಲೂ ಎಲ್ಲರೂ ಮಾಡಬಹುದಾದ ಯಜ್ಞ ‘ನಾಮಯಜ್ಞ’. ಅಂದರೆ ಭಗವಂತನ ನಾಮ ಸ್ಮರಣೆ. ಇದು ಯಜ್ಞದಲ್ಲಿ ಎಲ್ಲರಿಗೂ ಅನ್ವಯಿಸುವ ನಿಯತಕರ್ಮ.
ಇನ್ನು ದಾನ: ಬ್ರಹ್ಮಚಾರಿಗಳು ಕನ್ಯಾದಾನ ಮಾಡಲಾಗುವುದಿಲ್ಲ, ಅದನ್ನು ಗೃಹಸ್ಥ ಮಾಡಬೇಕು. ಗೃಹಸ್ಥನಿಗೆ ಕನ್ಯಾದಾನ ನಿಯತಕರ್ಮ. ಎಲ್ಲರೂ ಮಾಡಬಹುದಾದ ದಾನ-ಅಭಯದಾನ ಮತ್ತು ಜ್ಞಾನದಾನ.
ಮೂರನೆಯದು ತಪಸ್ಸು: ಕೆಲವು ತಪಸ್ಸನ್ನು ಎಲ್ಲರೂ ಮಾಡಲಾಗುವುದಿಲ್ಲ. ಅದಕ್ಕೆ ವೇದಧೀಕ್ಷೆ ಬೇಕಾಗಬಹುದು. ಆದರೆ ಎಲ್ಲರೂ ಮಾಡಬಹುದಾದ ತಪಸ್ಸು ಎಂದರೆ ಉಪವಾಸಾದಿ ವೃತಾನುಷ್ಠಾನಗಳು. ಈ ತಪಸ್ಸನ್ನು ಮನುಷ್ಯ ಮಾತ್ರದವರು ಮಾಡಬಹುದು. ಹೀಗೆ ಯಾರಿಗೆ ಯಾವ ಕರ್ಮ ನಿಯತವೋ ಆ ಕರ್ಮವನ್ನು ಮಾಡಬೇಕು. ನಿಯತ ಕರ್ಮದಲ್ಲಿ ಫಲಾಪೇಕ್ಷೆಯ ಪ್ರಶ್ನೆಯೇ ಇಲ್ಲ...

Monday 25 March 2013

Krishna and Bhagavad Gita

Pic sent by Mitul Patel.

Does Athma perform any activity in this body?

His Divine Grace A.C. Bhakthivedanta Swami Srila Prabhupada, Founder Acharya, International Society for Krishna Consciousness, explains the words of Krishna in BHAGAVAD GITA AS IT IS (C-5, T-14):

na kartrtvam na karmani
lokasya srjati prabhuh
na karma-phala-samyogam
svabhavas tu pravartate

TRANSLATION

The embodied spirit, master of the city of his body, does not create activities, nor does he induce people to act, nor does he create the fruits of action. All this is enacted by the modes of material nature.

PURPORT

The living entity, as will be explained in the Seventh Chapter, is one of the energies or natures of the Supreme Lord but is distinct from matter, which is another nature--called inferior--of the Lord. Somehow the superior nature, the living entity, has been in contact with material nature since time immemorial. The temporary body or material dwelling place which he obtains is the cause of varieties of activities and their resultant reactions. Living in such a conditional atmosphere, one suffers the results of the activities of the body by identifying himself (in ignorance) with the body. It is ignorance acquired from time immemorial that is the cause of bodily suffering and distress. As soon as the living entity becomes aloof from the activities of the body, he becomes free from the reactions as well. As long as he is in the city of body, he appears to be the master of it, but actually he is neither its proprietor nor controller of its actions and reactions. He is simply in the midst of the material ocean, struggling for existence.

The waves of the ocean are tossing him, and he has no control over them. His best solution is to get out of the water by transcendental Krsna consciousness. That alone will save him from all turmoil.

Bhagavad Gita Kannada

ಒಬ್ಬ ಕೆಟ್ಟದ್ದನ್ನು ಮಾಡಿ ಒಳ್ಳೆಯವನು ಎಂದು ಯಶಸ್ಸನ್ನು ಗಳಿಸಬಹುದು. ಇನ್ನೊಬ್ಬ ಜೀವಮಾನವೆಲ್ಲ ಒಳ್ಳೆಯ ಕೆಲಸ ಮಾಡಿ ಬೇಡವಾದ ಅಪವಾದ ಕೇಳಿ ದುರಂತಕ್ಕೊಳಗಾಗಬಹುದು. ಇದು ತೀರ್ಮಾನವಾಗುವುದು ನಮ್ಮ ಜೀವನದ ನಡೆಯ ಮೇಲೆ. ಇದಕ್ಕಾಗಿ ಈ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಅಪವಾದ ಬಂದಾಗ ಹೇಗಿರಬೇಕು ಎನ್ನುವುದನ್ನು ಕೃಷ್ಣ ತನ್ನ ಜೀವನ ಕ್ರಮದಲ್ಲಿ ನಮಗೆ ತೋರಿಸಿಕೊಟ್ಟಿದ್ದಾನೆ. ಶಮಂತಕ ಮಣಿಯನ್ನು ಕೃಷ್ಣ ಕದ್ದ ಎನ್ನುವ ಅಪವಾದ ಕೃಷ್ಣನಿಗೆ ಬಂದಾಗ ಕೃಷ್ಣನ ನಡೆ ಇದಕ್ಕೆ ಉತ್ತಮ ದೃಷ್ಟಾಂತ.

ಹೀಗೆ “ಈ ಎಲ್ಲಾ ಭಾವಗಳು ಜೀವಜಾತಕ್ಕೆ ಬರುವುದು ನನ್ನಿಂದಲೆ” ಎನ್ನುತ್ತಾನೆ ಕೃಷ್ಣ. ಯಾರಿಗೆ ಯಾವ ಕಾಲದಲ್ಲಿ ಯಾವ ಭಾವ ಬರಬೇಕು ಅನ್ನುವುದು ಭಗವಂತನ ನಿರ್ಧಾರ. ನಮ್ಮ ಮನಸ್ಸಿನ ಸ್ಥಿತಿಯ ಒಂದೊಂದು ಚಲನ-ವಲನ ಭಗವಂತನ ಅಧೀನ. ಇದು ನಾವು ನಮ್ಮ ಉಪಾಸನೆಯಲ್ಲಿ ತಿಳಿದಿರಬೇಕಾದ ಮೂಲಭೂತ ಸತ್ಯ. ಇದು ಕೃಷ್ಣ ಕೊಟ್ಟ ಮಾನಸಿಕ ಉಪಾಸನೆಯ ಅದ್ಭುತ ಚಿತ್ರಣ...

Monday 18 March 2013

Bhagavad Gita Kannada

ಒಬ್ಬ ಸಾಮಾನ್ಯ ಮನುಷ್ಯನಿಗೆ ದಿನವೂ ಯಜ್ಞ, ದಾನ, ತಪಸ್ಸನ್ನು ಮಾಡಲು ಸಾಧ್ಯವಿದೆಯೇ ?

ಸಾಧ್ಯವಿದೆ ...ನಾವು ಮಾಡುವ ಪ್ರತಿಯೊಂದು ಕೆಲಸವೂ ಒಂದು ದೇವರಪೂಜೆ, ಅದು ಭಗವಂತನಿಗೆ ಅರ್ಪಿತವಾಗಿ ಅವನು ಪ್ರೀತನಾಗಲಿ ಎಂದು ಮಾಡುವುದು ಯಜ್ಞ. ನಾನು ಆಡಿದ ಮಾತೆಲ್ಲವೂ ನಿನ್ನ ಸ್ತೋತ್ರವಾಗಲಿ, ನಾನು ನಡೆದ ನಡೆಯಲ್ಲವೂ ನಿನ್ನ ಪ್ರದಕ್ಷಿಣೆಯಾಗಲಿ, ನಾನು ಮಲಗಿದ್ದೆಲ್ಲವೂ ನಿನಗೆ ನಮಸ್ಕಾರವಾಗಲಿ, ನಾನು ಮಾಡುವ ಪ್ರತಿಯೊಂದು ಕರ್ಮವೂ ನಿನಗೆ ಪೂಜೆಯಾಗಲಿ ಎನ್ನುವ ಅನುಸಂಧಾನದಿಂದ ಬದುಕಿದಾಗ ಅದು ಯಜ್ಞವಾಗುತ್ತದೆ.

ಇನ್ನು ಎರಡನೇ ಕರ್ಮ-ದಾನ. ನಮ್ಮಲ್ಲಿಲ್ಲದ್ದನ್ನು ನಾವು ಇನ್ನೊಬ್ಬರಿಗೆ ಕೊಡಲು ಸಾಧ್ಯವಿಲ್ಲ. ಆದರೆ ಯಾರಿಗೆ ಯಾವಾಗ ಯಾವುದರ ಅಗತ್ಯವಿದೆಯೋ, ಅದು ನಮ್ಮಲ್ಲಿದ್ದರೆ, ಅದನ್ನು ನಿಸ್ವಾರ್ಥವಾಗಿ, ಪ್ರಚಾರದ ಬಯಕೆ ಇಲ್ಲದೆ ಕೊಡುವುದು ದಾನ.

ಮೂರನೆಯ ಕರ್ಮ-ತಪಸ್ಸು. ದೊಡ್ಡವರಿಗೆ ಗೌರವಕೊಡುವುದು, ಸ್ವಚ್ಛವಾಗಿರುವುದು, ಪ್ರಾಮಾಣಿಕವಾದ ನೇರ ನಡೆ, ಸ್ವಚ್ಛಂದಕಾಮಕ್ಕೆ ಕಡಿವಾಣ(ಬ್ರಹ್ಮಚರ್ಯ), ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದು, ಇತ್ಯಾದಿ. ಇದು ನಾವು ದೈನಂದಿನ ಜೀವನದಲ್ಲಿ ಆಚರಿಸಬಹುದಾದ ತಪಸ್ಸು..